ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ದಿನಾಂಕ 08-08-2026ನೇ ಶನಿವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.30 ರವರೆಗೆ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗ ಇಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ÷ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿAದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ. ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರೆ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಇದು ಸಂಘದ ವತಿಯಿಂದ ಜರುಗುವ 113ನೇ ಉಚಿತ ವೈದ್ಯಕೀಯ ಶಿಬಿರವಾಗಿದ್ದು, ಈ ಶಿಬಿರವನ್ನು ಲಯನ್ಸ್ ಕ್ಲಬ್, ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ ನೀರುಮಾರ್ಗ, ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯದುಕೊಳ್ಳಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದರು.

