ಕಲಬುರ್ಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಹೈದರಾಬಾದ್‌ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತದೆ.
ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ದಿವಿಜ್ಞ ಯು.ಎಸ್ , ಧನ್ವಿ ಎ.ಎಮ್, ಸಾನ್ವಿತ ನೆಕ್ಕರೆ , ಗುಣಶ್ರೀ , ಪ್ರತೀಕ್ಷ, ಸೃಷ್ಠಿ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ತನುಶ್ರೀ , ಯಜ್ಞಶ್ರೀ ಭಾಗವಹಿಸಿದರು. ಪ್ರಥಮ ವಿಜ್ಞಾನ ವಿಭಾಗದ ಜಿ.ಎಂ ಕೀರ್ತಿ ಇವರು 100mಣಡಿ ಹರ್ಡಲ್ಸ್, ಟ್ರಿಪಲ್ ಜಂಪ್, ಹೈ ಜಂಪ್‌ನಲ್ಲಿ ಚಿನ್ನದ ಪದಕ ಪಡೆಯುವುದರೊಂದಿಗೆ ವೈಯಕ್ತಿಕ ಚಾಂಪಿಯನ್ ಪಡೆದಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

