ಹೆಬ್ರಿ ಕುಲಾಲ ಸಂಘದಿಂದ ಆಗಸ್ಟ್ 9ರಂದು ‘ಆಟಿಡೊಂಜಿ ಕುಲಾಲ ಕೂಟ’

0
16

ಹೆಬ್ರಿ: ಹೆಬ್ರಿ ತಾಲೂಕಿನ ಕುಲಾಲ ಸಂಘ (ರಿ.) ಆಶ್ರಯದಲ್ಲಿ ‘ಆಟಿಡೊಂಜಿ ಕುಲಾಲ ಕೂಟ-2026’ ಕಾರ್ಯಕ್ರಮವು ಆಗಸ್ಟ್ 9ರಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ನಡೆಯಲಿದೆ.

ಆಟಿ ತಿಂಗಳ ಸಂಪ್ರದಾಯ, ಸಂಸ್ಕೃತಿ ಹಾಗೂ ಸಮುದಾಯದ ಬಾಂಧವ್ಯವನ್ನು ಬೆಸೆಯುವ ಉದ್ದೇಶದಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಏಕವ್ಯಕ್ತಿ ನೃತ್ಯ, ಗುಂಪು ನೃತ್ಯ, ಪಾಡ್ದನ ಗಾಯನ, ಶೋಭಾನೆ ಹಾಡು, ಮಕ್ಕಳಿಗಾಗಿ ರಸಪ್ರಶ್ನೆ ಸ್ಪರ್ಧೆ, ಆಟಿ ಹಬ್ಬದ ವಿಶೇಷತೆ ಕುರಿತು ಭಾಷಣ ಹಾಗೂ ಹಳೆ ಕಾಲದ ತಿಂಡಿ-ತಿನಿಸುಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಬಳಿಕ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳು ಜರುಗಲಿವೆ. ಮಧ್ಯಾಹ್ನ ಹಳೆ ಕಾಲದ ಸಾಂಪ್ರದಾಯಿಕ ತಿಂಡಿ-ತಿನಿಸುಗಳೊಂದಿಗೆ ಸಹಭೋಜನವೂ ಆಯೋಜಿಸಲಾಗಿದೆ.

ಸ್ವಜಾತಿ ಬಂಧುಗಳು ಹಾಗೂ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.