ಮುಲ್ಕಿ : ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕಾರ್ನಾಡ್ ಬಳಿ ಕಳೆದ ಜೂನ್28 ರಾತ್ರಿ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ನಾಡ್ ಅಮೃತಾನಂದಮಯಿ ನಗರ ನಿವಾಸಿ ಅಕ್ಷಿತ್ (32)ರವರು ಆ. 7 ಶುಕ್ರವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತ ಅಕ್ಷಿತ್ ರವರು ಕಾರ್ನಾಡ್ ಅಮೃತಾನಂದಮಯಿ ನಗರದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದು ಪ್ರತಿಯೊಬ್ಬರ ಜೊತೆಗೆ ಸ್ನೇಹಮಾಯಿಯಾಗಿದ್ದ ಎಂದು ನಿಕಟವರ್ತಿಗಳು ತಿಳಿಸಿದ್ದಾರೆ ಅಪಘಾತದಲ್ಲಿ ಗಾಯಗೊಂಡಿದ್ದ ಇನ್ನೋರ್ವ ಯುವಕ ಮಾನೀಶ್ ಚೇತರಿಸಿಕೊಂಡಿದ್ದಾನೆ.
ಅಪಘಾತ ಸಂಭವಿಸಿದ್ದು ಹೇಗೆ?
ಬೈಕ್ ಸವಾರರು ಕಾರ್ನಾಡ್ ಕಡೆಯಿಂದ ಮುಲ್ಕಿ ಕಡೆಗೆ ತೆರಳುತ್ತಿದ್ದರು. ಈ ವೇಳೆ, ವಿರುದ್ಧ ದಿಕ್ಕಿನಲ್ಲಿ ಮೂಡಬಿದ್ರೆ ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

