ನವದೆಹಲಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವ ಪದವೀಧರ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದ ವಿವಿಧ ಸಾ ರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿನ ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA/ಕ್ಲರ್ಕ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 11,403 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ 1,414 ಹುದ್ದೆಗಳು ಲಭ್ಯವಿವೆ.
ಯಾವ ವಿದ್ಯಾರ್ಹತೆ ಬೇಕು?
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ (Degree) ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಇರಬೇಕು. ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ₹175, ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳಿಗೆ ₹850 ಶುಲ್ಕ ನಿಗದಿಪಡಿಸಲಾಗಿದೆ.
ಎರಡು ಹಂತಗಳಲ್ಲಿ ಪರೀಕ್ಷೆ
CSA ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಪೂರ್ವಭಾವಿ ಪರೀಕ್ಷೆ (Prelims) ಹಾಗೂ ಮುಖ್ಯ ಪರೀಕ್ಷೆ (Mains) ಒಳಗೊಂಡಿರಲಿದೆ. ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 10 ಮತ್ತು 11ರಂದು ನಡೆಯಲಿದ್ದು, ಮುಖ್ಯ ಪರೀಕ್ಷೆ ಡಿಸೆಂಬರ್ 27ರಂದು ನಡೆಯಲಿದೆ. ಅಂತಿಮ ಫಲಿತಾಂಶವನ್ನು 2027ರ ಮಾರ್ಚ್‌ನಲ್ಲಿ ಪ್ರಕಟಿಸುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ 1,414 ಹುದ್ದೆಗಳು
ಕರ್ನಾಟಕ ರಾಜ್ಯಕ್ಕೆ ಒಟ್ಟು 1,414 ಹುದ್ದೆಗಳು ಹಂಚಿಕೆಯಾಗಿವೆ. ಬ್ಯಾಂಕ್‌ವಾರು ಹುದ್ದೆಗಳ ವಿವರ ಹೀಗಿದೆ:
- ಕೆನರಾ ಬ್ಯಾಂಕ್: 800
- ಪಂಜಾಬ್ ನ್ಯಾಷನಲ್ ಬ್ಯಾಂಕ್: 234
- ಬ್ಯಾಂಕ್ ಆಫ್ ಬರೋಡಾ: 180
- ಇಂಡಿಯನ್ ಓವರ್‌ಸೀಸ್ ಬ್ಯಾಂಕ್: 61
- ಬ್ಯಾಂಕ್ ಆಫ್ ಇಂಡಿಯಾ: 40
- ಇಂಡಿಯನ್ ಬ್ಯಾಂಕ್: 40
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ: 29
- ಬ್ಯಾಂಕ್ ಆಫ್ ಮಹಾರಾಷ್ಟ್ರ: 17
- ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್: 5
ಆಗಸ್ಟ್ 21 ಕೊನೆಯ ದಿನ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 21, 2026ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ವಯೋಮಿತಿ, ಪರೀಕ್ಷಾ ಮಾದರಿ, ಶುಲ್ಕ ಹಾಗೂ ಇತರ ಅರ್ಹತಾ ಮಾನದಂಡಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಅಗತ್ಯ.
ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್ ಅರ್ಜಿಗಾಗಿ ಅಭ್ಯರ್ಥಿಗಳು IBPS ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡಬಹುದು.

