ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಕ್ವಿಟ್ ಇಂಡಿಯಾ ದಿನಾಚರಣೆ

0
7


ವರದಿ ರಾಯಿ ರಾಜ ಕುಮಾರ್
ಮಂಗಳೂರು ಟಾಗೋರ್ ಪಾರ್ಕ್ ನಲ್ಲಿರುವ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಸಂಸ್ಥೆಯವರು ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆಯನ್ನು ಟಾಗೋರ್ ಪಾರ್ಕನಲ್ಲಿ ಆಚರಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಕಾರ್ಪೊರೇಟರ್ ಎ ಸಿ ವಿನಯರಾಜ್ ಅವರು ಧ್ವಜಾರೋಹಣ ಗೈದರು.
ತರುವಾಯ ನಡೆದ ಸಭಾ ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆಗೆ ಗೈದು ಗಾಂಧೀಜಿಯವರ ಆದರ್ಶಗಳನ್ನು ಪಾಲಿಸುವಂತೆ ಕಾರ್ಪೊರೇಟರ್ ವಿದ್ಯಾರ್ಥಿಗಳಲ್ಲಿ ಕೇಳಿಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯ ಸಂಬಂಧಿತ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಗಾಂಧೀಜಿಯವರ ವಿಚಾರಧಾರೆಯ ಹಲವಾರು ಅಂಶಗಳು ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲ್ಪಟ್ಟಿತು. ಪ್ರತಿಷ್ಠಾನದ ಉಪಾಧ್ಯಕ್ಷ ಪ್ರಭಾಕರ ಶ್ರೀಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ ಇಸ್ಮಾಯಿಲ್ ಎನ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕಲ್ಲೂರು ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಎನ್ ಜಿ ಮೋಹನ್ ವಂದಿಸಿದರು.