ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಪಾಲೆ ಕೆತ್ತೆ ಕಷಾಯ ವಿತರಣೆ

0
60

ಉಡುಪಿ: ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಿಗೆ ಗೌರವ ನೀಡುವ ಉದ್ದೇಶದಿಂದ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಆಗಸ್ಟ್ 12ರಂದು ಬೆಳಗ್ಗೆ 5 ಗಂಟೆಗೆ ಉಡುಪಿ ಕ್ಲಾಕ್ ಟವರ್ ಬಳಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಾಲೆ ಕೆತ್ತೆ ಕಷಾಯ ವಿತರಿಸಲಾಗುವುದು.

ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಆಟಿ ತಿಂಗಳ ಅಮಾವಾಸ್ಯೆಯಂದು ಪಾಲೆ ಮರದ ಕಡ್ಡಿಯಿಂದ ತಯಾರಿಸಿದ ಕಷಾಯ ಸೇವಿಸುವ ಪದ್ಧತಿ ತುಳುನಾಡಿನ ಹಲವು ಭಾಗಗಳಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಹಿರಿಯರು ಪಾಲಿಸಿಕೊಂಡು ಬಂದಿರುವ ಇಂತಹ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಹಾಗೂ ಸಂರಕ್ಷಿಸುವ ಉದ್ದೇಶದಿಂದ ತುಳುನಾಡ ರಕ್ಷಣಾ ವೇದಿಕೆ ಪ್ರತಿವರ್ಷ ಆಟಿ ಅಮಾವಾಸ್ಯೆ ಸಂದರ್ಭದಲ್ಲಿ ಪಾಲೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಆಧುನಿಕ ಜೀವನಶೈಲಿಯ ನಡುವೆಯೂ ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಜ್ಞಾನವನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾಲೆ ಕಷಾಯ ಸ್ವೀಕರಿಸುವಂತೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಮನವಿ ಮಾಡಿದ್ದಾರೆ.

ಆಗಸ್ಟ್ 12 ರಂದು , ಬೆಳಗ್ಗೆ 5 ಗಂಟೆಗೆ ಕ್ಲಾಕ್ ಟವರ್, ಉಡುಪಿಯಲ್ಲಿ ನಡೆಯಲಿದೆ.

ನಮ್ಮ ಸಂಸ್ಕೃತಿ – ನಮ್ಮ ಹೆಮ್ಮೆ; ನಮ್ಮ ಪರಂಪರೆ – ನಮ್ಮ ಹೊಣೆ ಎಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಲಿದೆ.