ಶಾಲಾ ಮಕ್ಕಳಿದ್ದ ಆಟೋ ರಿಕ್ಷಾ ಪಲ್ಟಿ

0
104

ಮಡಂತ್ಯಾರು : ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಣಕಜೆ ಸಮೀಪ ಪಲ್ಟಿಯಾದ ಘಟನೆ ಸಂಭವಿಸಿದೆ.

ಮಡಂತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಶಾಲಾ ಮಕ್ಕಳು ಹಾಗೂ ಚಾಲಕ ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಆಟೋ ರಿಕ್ಷಾದ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಸಾಕಷ್ಟು ಹಾನಿಯಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯ ಸಂಭವಿಸಿಲ್ಲ.