ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ

0
107

ಉಡುಪಿ : ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 14ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.