ಸ್ವಾಂತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ !

0
19

ಉಡುಪಿ: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಾಗೂ ರಾಷ್ಟ್ರಧ್ವಜಗಳ ಮಾರಾಟವನ್ನು ನಿಷೇಧಿಸುವಂತೆ ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಮನವಿ ನೀಡಲಾಯಿತು.

ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯತೆಯ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಅದೇ ದಿನ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳು ಕಸ ಮತ್ತು ಚರಂಡಿಗಳಲ್ಲಿ ಕಾಣಸಿಗುತ್ತವೆ. ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೆ ನಾಶವಾಗದ ಕಾರಣ ಪರಿಸರಕ್ಕೂ ಹಾನಿಯಾಗುತ್ತದೆ. ಪ್ಲಾಸ್ಟಿಕ್ ರಾಷ್ಟ್ರಧ್ವಜದ ತಯಾರಿಕೆ ಹಾಗೂ ಮಾರಾಟ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲೂಕುಗಳ ತಹಶೀಲ್ದಾರರಿಗೆ ಮನವಿ ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ಅಪಮಾನ ಅಥವಾ ಅನಾದರವಾಗುವಂತಹ ಕೃತ್ಯಗಳು ನಡೆಯದಂತೆ ಜಿಲ್ಲಾ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಇಪ್ಪತ್ತೈದಕ್ಕೂ ಅಧಿಕ ಶಾಲಾ-ಕಾಲೇಜುಗಳಿಗೆ ಮನವಿ ನೀಡಲಾಯಿತು.

ಪ್ಲಾಸ್ಟಿಕ್ ಬಳಸಿ ರಾಷ್ಟ್ರಧ್ವಜದ ಅಪಮಾನವನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಹಾಗೂ ಶಿಕ್ಷಣ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸಿದ್ದವು. ಅದರ ಪ್ರಕಾರ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಸಂವಿಧಾನಬಾಹಿರವಾಗಿದೆ.

“ಭಾವಿ ಪೀಳಿಗೆ ರಾಷ್ಟ್ರಾಭಿಮಾನಿಗಳಾಗಲಿ” ಎಂಬ ಉದ್ದೇಶದಿಂದ ಸಮಿತಿಯು ಕಳೆದ 23 ವರ್ಷಗಳಿಂದ “ರಾಷ್ಟ್ರಧ್ವಜವನ್ನು ಗೌರವಿಸಿ” ಎಂಬ ಉಪಕ್ರಮವನ್ನು ಜಾರಿಗೊಳಿಸುತ್ತಿದೆ.