ಆ.16 ವಿಶ್ವ ತುಳುವೆರ್ (ರಿ.) ವತಿಯಿಂದ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

0
37

ಮಂಗಳೂರು : ತುಳುನಾಡಿನ ಶ್ರೀಮಂತ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶ್ವ ತುಳುವೆರ್ (ರಿ.) ವತಿಯಿಂದ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ಆ.16ರಂದು ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ಮಂಗಳೂರಿನ ಕದ್ರಿ–ಮಲ್ಲಿಕಟ್ಟೆ ಗ್ರೌಂಡ್ ಸಮೀಪದ ಸರಕಾರಿ ಹಿರಿಯ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ತುಳು ಲಿಪಿ ಕಲಿಕಾ ಸ್ಪರ್ಧೆ, ಚೆನ್ನೆದ ಮನೆ ಗೊಬ್ಬು, ಲಗೋರಿ, ದೀಪದ ಬತ್ತಿ ಕಟ್ಟುವ ಸ್ಪರ್ಧೆ ಸೇರಿದಂತೆ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ತುಳುವರು, ಕಲಾಭಿಮಾನಿಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕೋರಿದ್ದಾರೆ.