ಹಂಗಾರಕಟ್ಟೆ: ಇಲ್ಲಿನ ಚೇತನಾ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಂಗಾರಕಟ್ಟೆ–ಸಾಸ್ತಾನ ರೋಟರಿ ಕ್ಲಬ್ ಅಧ್ಯಕ್ಷ ರೊ. ಕುಸುಮ ಮನೋಜ್ ಅವರು ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಲ್ಪನಾ ಶೆಟ್ಟಿ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಬಿ. ಭರತ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಅಧ್ಯಕ್ಷರು ,ತಾರನಾಥ ಶೆಟ್ಟಿ, ಫಾರ್ಚುನ್ ಕಾಲೇಜ್ ಚೇರ್ಮನ್ ವಿಘ್ನೇಶ್ವರ ಅಡಿಗ, ಶ್ರೀ ಜೇಮ್ಸ್ ರೋಡ್ರಿಗಸ್, ಸ್ಮಿತಾ ಮೋಲ್, ಶ್ರೀಮತಿ ಸುಜಾತಾ ಟಿ. ಶೆಟ್ಟಿ, ರೊ. ಲೀಲಾವತಿ, ರೊ. ಮನೋಜ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಫಾರ್ಚುನ್ ಕಾಲೇಜ್ ಆಫ್ ಹೆಲ್ತ್ ಸೈನ್ಸ್‌ನ ಪ್ರಾಧ್ಯಾಪಕ ವೃಂದ, ವಿದ್ಯಾರ್ಥಿಗಳು, ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಚಂದ್ರ ಅವರು ಸ್ವಾತಂತ್ರ್ಯದ ಮಹತ್ವ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗದ ಕುರಿತು ಮಾತನಾಡಿ, ವಿದ್ಯಾರ್ಥಿಗಳು ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಹರ್ಷವರ್ಧನ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಐರೋಡಿ ಗ್ರಾಮ ಪಂಚಾಯತ್ ಹಾಗೂ ಐರೋಡಿ–ಹಂಗಾರಕಟ್ಟೆ–ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುವ ರೀತಿಯಲ್ಲಿ ನಡೆಯಿತು.

