ನಂದಳಿಕೆಯ ಬೋರ್ಡ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ

0
6

ನಂದಳಿಕೆ: ಶತಮಾನ ಕಂಡ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಬೋರ್ಡ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಕಾರ್ಯಕ್ರಮ ನಡೆಯಿತು.

ವಿವಿಧ ಸ್ಪರ್ಧೆಯಲ್ಲಿ ವಿಜೇತಯರಾದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಮಕ್ಕಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
ಈ ಶಾಲೆಯಲ್ಲಿ ಕಲಿತು 10ನೇ ತರಗತಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷೆ ಮಮತಾ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ವಿಕೆ ರಾವ್ ನಂದಳಿಕೆ. ಗೌರವಾಧ್ಯಕ್ಷರಾದ ಬಾಲಚಂದ್ರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಭಾಷ್ ಕುಮಾರ್ ನಂದಳಿಕೆ ಹಾಗೂ ಶ್ರೀಮತಿ ಸುಮತಿ ಬಂಜನ್ ಭಾಗವಹಿಸಿದ್ದರು.

ಮುಖ್ಯ ಶಿಕ್ಷಕರಾದ ಶ್ರೀಮತಿ ಜೆಸಿಂತಾ ಸ್ವಾಗತಿಸಿ ಚಂದ್ರಕಾಂತ್ ಡೇಸಾರವರು ಪ್ರಾಸ್ತವಿಕವಾಗಿ ಮಾತನಾಡಿದರು.ನಿವೃತ್ತ ಶಿಕ್ಷಕರಾದ ಸದಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಆಂಗ್ಲ ಮಾಧ್ಯಮ ಶಿಕ್ಷಕಿಯಾದ ಶ್ರೀಮತಿ ಅನಿತಾ ವಂದಿಸಿದರು.

ಆಂಗ್ಲ ಮಾಧ್ಯಮ ಮಕ್ಕಳು ಮತ್ತು ಕನ್ನಡ ಮಾಧ್ಯಮ ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.