ಜಿಲ್ಲೆಯಲ್ಲಿ ನಾಗರಪಂಚಮಿ ಸಂಭ್ರಮ

0
11

ಉಡುಪಿ : ಜಿಲ್ಲೆಯಾದ್ಯಂತ ಸೋಮವಾರ ನಾಗರಪಂಚಮಿ ಹಬ್ಬವನ್ನು ವಿವಿಧ ದೇವಸ್ಥಾನಗಳಲ್ಲಿ, ನಾಗ ಸಾನ್ನಿಧಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಮುಚ್ಚಲಕೋಡು, ಮಾಂಗೋಡು, ತಾಂಗೋಡು, ಅರಿತೋಡು ಸುಬ್ರಹ್ಮಣ್ಯ ದೇವಸ್ಥಾನ, ಕರಂಬಳ್ಳಿಯ ವೆಂಕಟರಮಣ ದೇವಸ್ಥಾನ, ಶ್ರೀವೆಂಕಟರಮಣ ದೇವಸ್ಥಾನ, ಗುಂಡಿಬೈಲು ಸುಬ್ರಹ್ಮಣ್ಯ ದೇವಸ್ಥಾನ, ಕಿನ್ನಿಮೂಲ್ಕಿಯ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಾಗಸನ್ನಿಧಿ, ಮಠದಬೆಟ್ಟುವಿನ ಸಪರಿವಾರಕ ಶ್ರೀ ನಾಗಬ್ರಹ್ಮಸ್ಥಾನ, ಸಗ್ರಿ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನ ಮೊದಲಾದ ಕಡೆಗಳಲ್ಲಿ ಭಕ್ತರು ತನು (ಹಾಲು, ಎಳನೀರು, ಜೇನುತುಪ್ಪ) ಸಮರ್ಪಣೆ ಮಾಡಿ ನಾಗದೇವರಿಗೆ ಪೂಜೆ ಸಲ್ಲಿಸಿದರು.

ಕೃಷ್ಣ ಮಠದಲ್ಲಿ ನಾಗಾರಾಧನೆ

ಕೃಷ್ಣಮಠದಲ್ಲಿ ವಾದಿರಾಜತೀರ್ಥರು ಪ್ರತಿಷ್ಠೆ ಮಾಡಿದ ತಕ ಸನ್ನಿಧಾನದಲ್ಲಿ ಹಾಗೂ ಅಶ್ವತ್ಥಮರದ ನಾಗ ಸನ್ನಿಧಾನದಲ್ಲಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ನೆರವೇರಿಸಿದರು. ಶಿರಸಿ ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಠದ ನಾಗಬನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.