ಪರ್ಕಳ: ಜೆಸಿಐ ಪರ್ಕಳದ ವತಿಯಿಂದ 🇮🇳80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುಣೆಯ ಉದ್ಯಮಿ ಶ್ರೀ ಕರೂಣಾಕರ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಇನ್ನೋರ್ವ ಅತಿಥಿಯಾಗಿ ಜೆಸಿ ಪ್ರಶಾಂತ್ ಎಸ್., ವಲಯ ಸಂಯೋಜಕರು, ಯೂತ್ ಅಂಡ್ ಸ್ಪೋರ್ಟ್ಸ್, ವಲಯ 15 ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಸಿಐ ಪರ್ಕಳದ ಅಧ್ಯಕ್ಷರಾದ JFM ಭರತ್ ಕೆ. ಕುಲಾಲ್ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಸಿಐ ಪರ್ಕಳದ ಪೂರ್ವಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ರಾಷ್ಟ್ರಭಕ್ತಿ, ದೇಶಪ್ರೇಮ ಮತ್ತು ಏಕತೆಯ ಸಂದೇಶ ಸಾರಿದ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

