ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಭಾರತದ ಪ್ರಸಿದ್ಧ ಗ್ರಂಥಪಾಲಕ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರದ ಪಿತಾಮಹರಾದ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಈ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ. ರಾಧಾಕೃಷ್ಣ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಗ್ರಂಥಾಲಯವು ಜ್ಞಾನದ ವೃದ್ಧಿಗೆ ಪ್ರಮುಖ ಸಹಾಯಕವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಉತ್ತಮ ಪುಸ್ತಕಗಳು ಅಗತ್ಯವಾಗಿದ್ದು, ನಮ್ಮ ಗ್ರಂಥಾಲಯದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳು ಲಭ್ಯವಿದ್ದು, ಅವು ವಿದ್ಯಾರ್ಥಿಗಳ ಜ್ಞಾನವನ್ನು ವಿಸ್ತರಿಸಲು ಸಹಕಾರಿಯಾಗಿವೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೆಫ್ಟಿನೆಂಟ್ ವಿಜಯಲಕ್ಷ್ಮಿ, ಗ್ರಂಥಾಲಯ ಸಹಾಯಕಿ ಸೌಮ್ಯಾ ಹೆಗಡೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

