ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘದ ಉದ್ಘಾಟನೆ

0
2


ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಹಾಗೂ ಅರ್ಥಶಾಸ್ರ‍್ತ ವಿಭಾಗದ ಮುಖ್ಯಸ್ಥರಾದ ಡಾ| ಅರುಣ್ ಪ್ರಕಾಶ್ ಇವರು ಉಪಸ್ಥಿತರಿದ್ದು, ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು ಸಾಹಿತ್ಯವು ಮಾನವನ ಭಾವನೆ, ಆಲೋಚನೆ, ಅನುಭವ ಮತ್ತು ಸಂಸ್ಕೃತಿಯನ್ನು ವ್ಯಕ್ತಪಡಿಸುವ ಶಕ್ತಿಯುತ ಮಾಧ್ಯಮ. ಅದು ನಮ್ಮ ಜೀವನವನ್ನು ಅರ್ಥ ಮಾಡಿಕೊಳ್ಳಲು ಸಮಾಜವನ್ನು ಅರಿಯಲು ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯ ಮಾಡುವ ಸಾಧನವಾಗಿದೆ. ವಿದ್ಯಾರ್ಥಿಗಳಲ್ಲಿ ಭಾಷಾ ಜ್ಞಾನವನ್ನು ಬೆಳೆಸುವುದರ ಜೊತೆಗೆ, ಅವರ ಕಲ್ಪನಾಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ವಿಚಾರಶಕ್ತಿಯನ್ನು ಬೆಳೆಸುವಲ್ಲಿ ಸಾಹಿತ್ಯ ಸಂಘ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಯಾಮಣಿ ಟಿ.ಕೆ ವಹಿಸಿಕೊಂಡರು. ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿನಿಯರಾದ ಲಿಕ್ಷಿತಾ ಸ್ವಾಗತಿಸಿ, ದೃತಿ ವಂದಿಸಿದರು. ಮೇಘನಾ ಎಮ್.ವಿ ಕಾರ್ಯಕ್ರಮವನ್ನು ನಿರೂಪಿಸಿದರು.