ಕಲ್ಲ್ಯಾಣಪುರ : ಪ್ಲಾನೆಟ್ ಮಾರ್ಸ್ ಫೌಂಡೇಶನ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ, ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ CWC ಸದಸ್ಯರಾದ ಮಿತ್ರ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯೆ ಸಿಸ್ಟರ್ ಲಿಲ್ಲಿ ಪುಷ್ಪಾ, ಕಲ್ಲ್ಯಾಣಪುರ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ರಮೇಶ್ ನಾಯಕ್, ಜಿಲ್ಲಾ ರೋಟರಾಕ್ಟ್ ಪ್ರತಿನಿಧಿ Rtr. ರೇಷ್ಮಾ ರಮೇಶ್, ರೋಟರಾಕ್ಟ್ ಕ್ಲಬ್ ಆಫ್ ಉಡುಪಿ ಅಧ್ಯಕ್ಷ Rtr. ಅನಂತ ಕೃಷ್ಣ, SCI ಅಧ್ಯಕ್ಷ ಮಿತ್ರ ಕುಮಾರ್, ಸಂಸ್ಥೆಯ ಸದಸ್ಯರು ಹಾಗೂ ರೋಟರಾಕ್ಟ್ ಕ್ಲಬ್ ಆಫ್ ಉಡುಪಿ ಮತ್ತು ರೋಟರಾಕ್ಟ್ ಕ್ಲಬ್ ಆಫ್ MAHE, ಮಣಿಪಾಲದ ಸದಸ್ಯರು ಉಪಸ್ಥಿತರಿದ್ದರು.
ಸಂಸ್ಥೆಯ ಮಕ್ಕಳಿಂದ ಸ್ವಾತಂತ್ರ್ಯ ಹೋರಾಟದ ಮಹತ್ವ, ದೇಶಭಕ್ತಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಬಿಂಬಿಸುವ ಭಾಷಣಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಕುಮಾರಿ ಕಾವೇರಿ ಕಾರ್ಯಕ್ರಮವನ್ನು ನಿರೂಪಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಕಾರ್ಯಕ್ರಮದ ಅಂಗವಾಗಿ ರೋಟರಾಕ್ಟ್ ಕ್ಲಬ್ ಆಫ್ ಉಡುಪಿ ವತಿಯಿಂದ ಸಂಸ್ಥೆಯ ಮಕ್ಕಳಿಗೆ ಪರಿಸರ ಸ್ನೇಹಿ ಮರುಬಳಕೆ ಮಾಡಬಹುದಾದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ವಿತರಿಸಲಾಯಿತು. ಜೊತೆಗೆ ಋತುಚಕ್ರದ ಸ್ವಚ್ಛತೆ, ಆರೋಗ್ಯ ಮತ್ತು ಪರಿಸರ ಸ್ನೇಹಿ ನ್ಯಾಪ್ಕಿನ್‌ಗಳ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಮಕ್ಕಳ ಉತ್ಸಾಹಭರಿತ ಭಾಗವಹಿಸುವಿಕೆ, ಆತ್ಮವಿಶ್ವಾಸ ಹಾಗೂ ಪ್ರತಿಭೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ದೇಶದ ಗಡಿಗಳನ್ನು ಕಾಯುತ್ತಿರುವ ಸಶಸ್ತ್ರ ಪಡೆಗಳ ವೀರರನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮವು ದೇಶಭಕ್ತಿ, ಏಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಸಂದೇಶವನ್ನು ಸಾರುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

