ಬಾಳೆಹಣ್ಣು ದಾಸ್ತಾನು ಕೇಂದ್ರಕ್ಕೆ ಅಧಿಕಾರಿಗಳ ದಾಳಿ : ರಾಸಾಯನಿಕ ಬಾಟಲಿಗಳು ವಶ

0
314

ಉಡುಪಿ: ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಮಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.

ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ದಾಳಿ ವೇಳೆ ರಾಸಾಯನಿಕಗಳನ್ನು ಬಳಸಲು ಉಪಯೋಗಿಸುತ್ತಿದ್ದ ಪರಿಕರಗಳು ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ವಾಹನಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.