ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಎಚ್.ಮನ್ನಿತಾ, ಶರಣ್ಯ ಎಚ್. ಎನ್. ಆತ್ಮಿಕ, ಹಾಗೂ ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಕೆ. ವಿ. ನಿಖಿಲ್ ಕುಮಾರ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್ಯರಮಣ ಕೆ. ಆರ್. ಅಭಿಲಾಷ್ ಬಿ. ವಿಕ್ರಮ್ ಎ. ಈ ಭಾಗವಹಿಸಿದರು.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ

