ಘನ್ಸೋಲಿಯ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶ್ರೀ ಪುತ್ತಿಗೆ ಮಠದ ಸ್ವಾಮಿಜಿ ಅವರು ಭೇಟಿ

0
14

ಶ್ರೀ ಪುತ್ತಿಗೆ ಮಠದ ಪೀಠಾಧಿಪತಿ, ಶ್ರೀ ಡಾ. ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆ. 21ರಂದು ಘನ್ಸೋಲಿಯ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಲಿರುವರು.

ಶ್ರೀ ಕ್ಷೇತ್ರದಲ್ಲಿ ಸಂಜೆ 3:00ರಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಜರದಲ್ಲಿದ್ದು. ಸಂಜೆ 5 ಗಂಟೆಗೆ ಶ್ರೀಗಳು ಉಪಸ್ಥಿತರಿದ್ದು ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ.

ಉಡುಪಿಯ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಪುತ್ತಿಗೆ ಮಠದ ಪೀಠಾಧಿಪತಿ, ಶ್ರೀ ಡಾ. ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ‘ವಿಶ್ವ ಗೀತಾ ಪರ್ಯಾಯ’ ಪೂಜಾ ಮಹೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಿದ ಬಳಿಕ, ತಮ್ಮ 53ನೇ ಚಾತುರ್ಮಾಸ್ಯ ವ್ರತ ದೀಕ್ಷೆಯನ್ನು ನವಿ ಮುಂಬೈನ ವಾಶಿಯಲ್ಲಿರುವ ನೂತನ ಶಾಖಾ ಮಠದಲ್ಲಿ ಆಚರಿಸುತ್ತಿರುವರು.