ಬಂಟ್ವಾಳ: ಭಾರತವು ಬಲಿಷ್ಠ ರಾಷ್ಟ್ರವಾಗಬೇಕಾದರೆ ಪರಸ್ಪರ ಸೌಹಾರ್ದ ಹಾಗೂ ಸಹಕಾರದ ಮನೋಭಾವ ಎಲ್ಲರಲ್ಲೂ ಮೂಡಬೇಕು ಎಂದು ಪ್ರೊ. ಮಂಚಿ ಹೇಳಿದರು.
ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಭಾರತದ ಮಾಜಿ ಪ್ರಧಾನಮಂತ್ರಿ ದಿ. ರಾಜೀವ್ಗಾಂಧಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಮನೋಭಾವ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಕಾಶೀನಾಥ ಶಾಸ್ತ್ರಿ ಹೆಚ್.ವಿ. ಅವರು ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ರು.

