ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

0
10

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಭೃಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿರುವ ಆರೋಪಿ, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಸದಾನಂದ ಪ್ರಭು ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.