ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಮಂಗಳೂರು ಇವರ ಸಹಯೋಗದಲ್ಲಿ ಗ್ರಾಹಕ ಜಾಗೃತಿ ಪ್ರಮಾಣಪತ್ರ ಕೋರ್ಸ್‌ನ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ ಮಾಡುವ ಮೂಲಕ ಗ್ರಾಹಕ ಜಾಗೃತಿ ಪ್ರಮಾಣಪತ್ರ ಕೋರ್ಸ್‌ಗೆ ಚಾಲನೆ ನೀಡಲಾಯಿತು.
ಸುನಂದ ಕೆ. ರವರು ಮಾತನಾಡಿ, ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಜಾಗೃತರಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಈ ಪ್ರಮಾಣಪತ್ರ ಕೋರ್ಸ್ ಮೂಲಕ ಗ್ರಾಹಕ ಜಾಗೃತಿಗೆ ಸಂಬಂಧಿಸಿದ ವಿಷಯಗಳ ಕುರಿತು ಜ್ಞಾನವನ್ನು ಪಡೆದು ಅದನ್ನು ಸಮಾಜದ ಇತರರಿಗೂ ತಲುಪಿಸುವಂತೆ ಕರೆ ನೀಡಿದರು. ಕಾರ್ಯದರ್ಶಿ ಸುನಂದ ದಂಬೇಕೋಡಿ ವಿದ್ಯಾರ್ಥಿಗಳು ಜಾಗೃತರಾಗಿ ಕೋರ್ಸ್‌ನಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಅವರು ಪ್ರಸಕ್ತ ವರ್ಷದ ಕೋರ್ಸ್‌ನ ರೂಪರೇಖೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಅಧ್ಯಕ್ಷೀಯ ನುಡಿಗಳಲ್ಲಿ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ರವರು, ಒಕ್ಕೂಟಕ್ಕೆ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಲು ಕೇಳಿಕೊಂಡರು. ಸಂಯೋಜಕ ರೋಬಿನ್ ಜೋಸೆಫ್ ಸೆರಾ ಸ್ವಾಗತಿಸಿದರು. ಐಶ್ವರ್ಯ ಎಂ.ಜೆ. ವಂದಿಸಿದರು. ರೈನಾ, ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
ವರದಿ ರಾಯಿ ರಾಜ ಕುಮಾರ್

