ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಕಾರದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 225ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ * 22 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.
ಈ ಸಂಚಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕರಾಗಿರುವ ಪೂರ್ಣಿಮಾ ಅವರಿಂದ ಸ್ವರಚಿತ ಕಥೆಯನ್ನು ಕೇಳುವಿರಿ.
ಈ ವಿಶೇಷ ಸಂಚಿಕೆಯಲ್ಲಿ ಮಂಗಳೂರು ಆಕಾಶವಾಣಿಯ ಮೊದಲ ಉದ್ಘೋಷಕ ಹಾಗೂ ವಾರ್ತಾವಾಚಕರಾಗಿದ್ದ ಕೆ.ಟಿ ಕೃಷ್ಞಕಾಂತ್ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ- ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಮಾನಸ ಅವರ ಶುಭನುಡಿಗಳನ್ನೂ ಆಲಿಸಲಿದ್ದೀರಿ. *ಆಗಸ್ಟ್ 23 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

