ನಡು ರಸ್ತೆಯಲ್ಲೇ ಅವಾಚ್ಯ ಶಬ್ದಗಳಿಂದ ಬೈದಾಟ: ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ

0
82

ಬೆಳ್ಳಾರೆ: ಬೆಳ್ಳಾರೆ ಮುಖ್ಯ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈದುಕೊಂಡು ಜಗಳವಾಡಿ ಅಶಾಂತಿ ಸೃಷ್ಟಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕಡ ಮನೆ ನಿವಾಸಿ ವಿಜೇಶ್ ಹಾಗೂ ಮಣಿಮಜಲು ನಿವಾಸಿ ಸಂತೋಷ್ ಎಂಬವರು ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದುಕೊಂಡು ಜಗಳವಾಡುತ್ತಿದ್ದ ವೇಳೆ ಪೊಲೀಸರು ಗಮನಿಸಿದ್ದಾರೆ ಎನ್ನಲಾಗಿದೆ.

ಬೆಳ್ಳಾರೆ ಪೊಲೀಸರು ಗಸ್ತು ನಿರತರಾಗಿದ್ದ ಸಂದರ್ಭದಲ್ಲಿ ಘಟನೆ ಗಮನಕ್ಕೆ ಬಂದಿದ್ದು, ಇಬ್ಬರನ್ನು ವಿಚಾರಿಸಲು ಮುಂದಾದಾಗ ಅವರು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಸ್ಥಳದಲ್ಲಿ ಜಗಳವಾಡಿ ಅಶಾಂತಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.