ಪುತ್ತೂರು ಘಟನೆ : ಶೀಘ್ರ ತನಿಖೆ ಮತ್ತು ಕಠಿಣ ಕಾನೂನು ಕ್ರಮಕ್ಕೆ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ ಆಗ್ರಹ

0
35

ಪುತ್ತೂರಿನ ದರ್ಭೆಯಲ್ಲಿ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುವುದು ಮತ್ತು ಕಾನೂನು ಪಾಲನೆಗೆ ಬಂದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಅತ್ಯಂತ ಖಂಡನೀಯ ಎಂದು ಕಿರಣ್ ಚಂದ್ರ ಡಿ ಪುಷ್ಪಗಿರಿ ತಿಳಿಸಿದರು.

ಸಂಯಮ ವಹಿಸಿ: ಸಾರ್ವಜನಿಕರು ಯಾವುದೇ ರೀತಿಯ ಕಾನೂನು ಕೈಗೆತ್ತಿಕೊಳ್ಳದೆ ಸಂಯಮದಿಂದ ವರ್ತಿಸಬೇಕು.

ಕಠಿಣ ಕ್ರಮಕ್ಕೆ ಆಗ್ರಹ: ಘಟನೆಗೆ ಕಾರಣರಾದವರ ಮೇಲೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

ಶಾಂತಿ ಕಾಪಾಡಿ: ಸಾರ್ವಜನಿಕರ ಭದ್ರತೆ ಹಾಗೂ ನಗರದ ಶಾಂತಿ-ಸೌಹಾರ್ದತೆಯನ್ನು ಎತ್ತಿಹಿಡಿಯುವುದು ಎಲ್ಲರ ಹೊಣೆಗಾರಿಕೆಯಾಗಿದೆ. ಪೊಲೀಸ್ ಇಲಾಖೆಯು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ ಆಗ್ರಹಿಸಿದ್ದಾರೆ.