ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

0
6

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಪ್ರಕಾಶ್ ಇವರು ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ವಾಣಿಜ್ಯವು ಡಿಜಿಟಲ್ ವಾಣಿಜ್ಯದ ಕಡೆಗೆ ಬದಲಾಗುತ್ತಿದೆ. ಭಾರತದಲ್ಲಿ ಸಿಎ ವೃತ್ತಿಗೆ ಅಪಾರ ಬೇಡಿಕೆಯಿದ್ದು, ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಯಶಸ್ಸು ಕೇವಲ ವೃತ್ತಿ ಜೀವನಕ್ಕೆ ಸೀಮಿತವಾಗಿಲ್ಲ, ಅದು ವ್ಯಕ್ತಿಯ ಜ್ಞಾನ,ಕೌಶಲ್ಯ, ನಡವಳಿಕೆ ಮತ್ತು ಸಾಧನೆಯ ಸಮಗ್ರ ಪ್ರತಿಬಿಂಬವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇವಿಪ್ರಸಾದ್ ಅವರು ವಹಿಸಿಕೊಂಡರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಾದ ಸಂಘದ ಅಧ್ಯಕ್ಷ ಪವನ್ ರಾಜೇಶ್, ಉಪಾಧ್ಯಕ್ಷ, ಶಮನ್ ಹಾಗೂ ಕಾರ್ಯದರ್ಶಿ ಪಾರ್ಥ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಾದ ಪವನ್ ಸ್ವಾಗತಿಸಿ, ಶಮನ್ ವಂದಿಸಿದರು. ವಿದ್ಯಾರ್ಥಿನಿ ಸಾಹಿತ್ಯ ನಿರೂಪಿಸಿದರು.