ಪ್ರಗತಿನಗರದಲ್ಲಿ ಜ್ಯೋತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0
8

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ (ರಿ )ಟ್ರಸ್ಟ್ ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾರ್ಯಕ್ರಮದಲ್ಲಿ ಮಣಿಪಾಲ ವಲಯ ದ ಪ್ರಗತಿನಗರ ಕಾರ್ಯಕ್ಷೇತ್ರದ ಜ್ಯೋತಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ್ರಗತಿನಗರ ಅಂಬೇಡ್ಕರ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಮಲ ಹಿರಿಯ ಸದಸ್ಯರು ಜ್ಯೋತಿ ಜ್ಞಾನವಿಕಾಸ ಕೇಂದ್ರ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಸಂತ್ ಶೆಟ್ಟಿ ಚೆನ್ನಿ ಬೆಟ್ಟು, ವಲಯಾಧ್ಯಕ್ಷರು, ತಾಲೂಕು ಜನಜಾಗೃತಿ ವೇದಿಕೆ ಇವರು ನೆರವೇರಿಸಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಮಾಡಲಾದ ಈ ಕಾರ್ಯಕ್ರಮ ಈ ಭಾಗದಲ್ಲಿ ಉತ್ತಮ ಸಂಘಟನೆಯಾಗಿ ಹೊರಹೊಮ್ಮಿದ್ದು, ಎಲ್ಲಾ ಮಹಿಳೆಯರು ತುಂಬಾ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಶುಭ ಹಾರೈಸಿದರು.

ಮಹಿಳೆಯರು ಶಿಕ್ಷತರಾದಾಗ ರಾದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದ ಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅನುಸೂಯ. ಎ. ಉಪನ್ಯಾಸಕರು, ಆನಂದ ತೀರ್ಥ ಪಿ. ಯು.ಕಾಲೇಜು, ಪಾಜಕ ಉಡುಪಿ. ಇವರು ಧಾರ್ಮಿಕ ಆಚರಣೆಗಳಲ್ಲಿ ಮಹಿಳೆಯ ಸಹಭಾಗಿತ್ವದ ಪ್ರಾಮುಖ್ಯತೆ, ಮಕ್ಕಳನ್ನು ಸತ್ಪ್ರಜೆಗಳಾಗಿ ಬೆಳೆಸುವಲ್ಲಿ ಮಹಿಳೆಯ ಪಾತ್ರದ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾವಿತ್ರಿ ವಲಯ್ಯಾಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಣಿಪಾಲವಲಯ, ಸುರೇಂದ್ರ ನಾಯ್ಕ್, ಕ್ಷೇತ್ರ ಯೋಜನಾಧಿಕಾರಿಗಳು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶ್ರೀ ಬಾಲಚಂದ್ರ ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು. ತಾಲೂಕಿನ ಜ್ಯಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೀತಾ ಕಾರ್ಯಕ್ರಮದ ನಿರೂಪಣೆಯನ್ನು, ರೇಖಾ ರವರು ಸ್ವಾಗತ, ಸುಮಿತ್ರಾ ರವರು ಪ್ರಾರ್ಥನೆ, ಸೇವಾ ಪ್ರತಿನಿಧಿ ಚಂದ್ರಕಲಾ ರವರು ಧನ್ಯವಾಧ ಸಮರ್ಪಣೆ ಮಾಡಿದರು. ಕೇಂದ್ರದ ಸದಸ್ಯರು ವರಮಹಾಲಕ್ಷ್ಮಿ ಪೂಜೆ, ಭಜನಾ ಕಾರ್ಯಕ್ರಮವನ್ನು ಮಾಡಿದರು. ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.