ಆ.29 ರಂದು ಅಂಚೆ ಇಲಾಖೆಯಿಂದ ಶ್ರಾವಣ ಸಂಭ್ರಮ

0
8

ದಾವಣಗೆರೆ : ಅಂಚೆ ಇಲಾಖೆ ಮತ್ತು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 29 ರಂದು ಶನಿವಾರ ಅಪರಾಹ್ನ 3 ಗಂಟೆಗೆ ದಾವಣಗೆರೆಯ ಜಯದೇವ ವೃತ್ತದಲ್ಲಿ ಇರುವ ಅಂಚೆ ಇಲಾಖೆಯ ಸಭಾಂಗಣದಲ್ಲಿ ಶ್ರಾವಣ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆಯ ಜಿಲ್ಲೆಯ ಅಧೀಕ್ಷಕರಾದ ಎಸ್.ಪಿ.ರವಿಯವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್‌ರಾಯ್ಕರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಯದೇವ ವೃತ್ತದ ಅಂಚೆ ಕಛೇರಿಯ ಪಾಲಕರಾದ ಬಿ.ನಾಗರಾಜ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ. ಅಂಚೆ ಇಲಾಖೆಯ ಮುತ್ತೆöÊದೆಯರಿಗೆ ಉಚಿತ ಆಕರ್ಷಕ ಗೃಹಿಣಿ ಸ್ಪರ್ಧೆ, ರಸಪ್ರಶ್ನೆ, ಮನೋರಂಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾವಣಗೆರೆಯ ಅಂಚೆ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಈ “ಶ್ರಾವಣ ಸಂಭ್ರಮ” ಸಮಾರಂಭನ್ನುಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.