ಪುತ್ತೂರು : ನಗರದ ದರ್ಬೆಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣ ಹಾಗೂ ಪೊಲೀಸ್ ಇಲಾಖೆಯ ಇಬ್ಬಗೆ ನೀತಿಯನ್ನು ಖಂಡಿಸಿ, ಗುಂಪುಗೂಡಿ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸದೆ ಇರುವ ಪೊಲೀಸರ ಕ್ರಮದ ವಿರುದ್ಧ ಸ್ವಯಂಪ್ರೇರಿತವಾಗಿ ಕರೆ ನೀಡಲಾಗಿದ್ದ ಪುತ್ತೂರು ನಗರ ಬಂದ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಬಂದ್‌ಗೆ ಸ್ಪಂದಿಸಿ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ ಅಂಗಡಿ ಮಾಲೀಕರು, ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರು, ಹೋಟೆಲ್ ಮಾಲೀಕರು ಮತ್ತು ಪುತ್ತೂರಿನ ಸಮಸ್ತ ನಾಗರಿಕ ಬಂಧುಗಳಿಗೆ ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಲಾಗಿದೆ.
ಅದೇ ರೀತಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಬಿಜೆಪಿ ಹಾಗೂ ವಿಚಾರ ಪರಿವಾರದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದಗಳನ್ನು ತಿಳಿಸಲಾಗಿದೆ. ಈ ಕುರಿತು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಯೋಜಕ ಮೋಹನದಾಸ್ ಕಾಣಿಯೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

