ಸೆ.4ರಂದು ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

0
36

ಉಡುಪಿ : ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ನಡೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು.

ಶೀರೂರು ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಸೆ. 5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೖಣ್ಮಯ ವಿಗ್ರಹದ ಮೆರವಣಿಗೆ ನಡೆಯಲಿದೆ ಎಂದರು.

2 ದಿನ ಹುಲಿವೇಷ ಸ್ಪರ್ಧೆ

ದಿವಾನ್‌ ಡಾ. ಉದಯ್‌ ಸರಳತ್ತಾಯ ಮಾತನಾಡಿ, ವಿಟ್ಲಪಿಂಡಿ ಉತ್ಸವದ ಅಂಗವಾಗಿ ರಾಜಾಂಗಣದಲ್ಲಿ ಸೆ.4ರಂದು 9 ರಿಂದ ಸಂಜೆ 5 ರವರೆಗೆ ಹಾಗೂ ಸೆ. 5ರಂದು ಸಂಜೆ 5ರಿಂದ ಹುಲಿ ವೇಷ ಹಾಗೂ ಜಾನಪದ ನೖತ್ಯ ಸ್ಪರ್ಧೆ ಹುಲಿವೇಷ ಸ್ಪರ್ಧೆ ನಡೆಯಲಿದೆ. ವಿಜೇತ ತಂಡಕ್ಕೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಸೆ. 6ರಂದು ಬೆಳಗ್ಗೆ ಕೋಟಿ ತುಳಸಿ ಅರ್ಚನೆ, ಸಾಯಂಕಾಲ 5 ಗಂಟೆಗೆ ರಾಜಾಂಗಣದಲ್ಲಿ ಅಷ್ಟಮಿ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಲ್ಲಯುದ್ಧ ಪ್ರದರ್ಶನ

ಈ ಬಾರಿ ವಿಶೇಷವಾಗಿ ಸೆ.5ರಂದು ಮಧ್ಯಾಹ್ನ ರಥಬೀದಿಯ ವಿಶೇಷ ವೇದಿಕೆಯಲ್ಲಿ ಮಂಡ್ಯ, ಮಂಗಳೂರು, ಮೈಸೂರಿನ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ಸಂಪ್ರದಾಯ ಬದ್ಧವಾಗಿ ಮಲ್ಲಯುದ್ಧ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.