ಅನ್ನ ಬ್ರಹ್ಮ ಸಮಿತಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಹಾಗೂ ಸಮಾಜ ಸೇವಕಿ ವಿದ್ಯಾಲತಾ ಶೆಟ್ಟಿ ಬನ್ನಂಜೆ ಅವರು ಆಯ್ಕೆಯಾಗಿದ್ದಾರೆ.
ನೂತನವಾಗಿ ರಚನೆಯಾದ ಅನ್ನ ಬ್ರಹ್ಮ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಅವರಿಗೆ ಸಮಿತಿಯ ಪರವಾಗಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಸಮಾಜ ಸೇವೆ, ಮಹಿಳಾ ಸಬಲೀಕರಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾಲತಾ ಶೆಟ್ಟಿ ಅವರ ನೇತೃತ್ವದಲ್ಲಿ ಅನ್ನ ಬ್ರಹ್ಮ ಸಮಿತಿಯು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಿ ಎಂದು ಹಾರೈಸಲಾಗಿದೆ.
ವರದಿ: ವಿನೋದ್ ಶೆಟ್ಟಿ

