ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

0
27

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಗಮ, ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಮೈಸೂರು ವಿಭಾಗದ ಜಿಲ್ಲಾ ಸಹಕಾರಿ ಯೂನಿಯನ್‌ಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರ ಆಯ್ಕೆಗೆ ಸಹಕಾರ ಕ್ಷೇತ್ರದ ಗಣ್ಯರು, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರು ವಿಭಾಗದ ಜಿಲ್ಲಾ ಸಹಕಾರಿ ಯೂನಿಯನ್‌ಗಳ ಕ್ಷೇತ್ರದಿಂದ ಆಡಳಿತ ಮಂಡಳಿಗೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಅವರ ಅನುಭವ ಮತ್ತು ಮಾರ್ಗದರ್ಶನವು ರಾಜ್ಯದ ಸಹಕಾರ ಚಳವಳಿಗೆ ಮತ್ತಷ್ಟು ಬಲ ನೀಡಲಿದೆ ಎಂದು ಅಭಿನಂದನೆ ಸಲ್ಲಿಸಿದವರು ಆಶಯ ವ್ಯಕ್ತಪಡಿಸಿದ್ದಾರೆ.

ನಮ್ಮ ತಂಡದ ಮಹಾಪೋಷಕರಾಗಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಈ ಸಂದರ್ಭದಲ್ಲಿ ಹಾರ್ದಿಕ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಲಾಗಿದೆ.