ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಆಗಸ್ಟ್ 28ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ

0
12

ಮೂಡುಬಿದಿರೆ: ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು–ಮುಡುಬಿದಿರೆ ಇಲ್ಲಿ ಆಗಸ್ಟ್ 28ರಂದು ಶುಕ್ರವಾರ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಸಾಮೂಹಿಕ ಹೂವಿನ ಪೂಜೆ ಹಾಗೂ ವರಮಹಾಲಕ್ಷ್ಮಿ ಪೂಜೆಯು ನಡೆಯಲಿವೆ.

ದಿನದ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ಪೂಜಾ ಕೈಂಕರ್ಯಗಳು, ಅಭಿಷೇಕ, ಅಲಂಕಾರ ಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಮಧ್ಯಾಹ್ನ ಶ್ರೀ ವರಮಹಾಲಕ್ಷ್ಮೀ ದೇವಿಯ ಮಹಾಪೂಜೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಬಳಿಕ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಸಂಜೆಯ ವೇಳೆಯಲ್ಲಿಯೂ ಭಜನಾ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರು ಹಾಗೂ ಭಕ್ತವೃಂದದ ಸಹಕಾರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾಜನರು ವಿನಂತಿಸಿದ್ದಾರೆ.