ಮೂಡುಬಿದಿರೆಯಲ್ಲಿ ಆ.28ರಂದು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0
21

ಮೂಡುಬಿದಿರೆ : ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಮೂಡುಬಿದಿರೆ ಹಾಗೂ ಶ್ರೀ ನಾರಾಯಣಗುರು ಸೇವಾದಳ, ಶ್ರೀ ನಾರಾಯಣಗುರು ಮಹಿಳಾ ಘಟಕದ ವತಿಯಿಂದ 9ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಆಗಸ್ಟ್ 28ರಂದು ಶುಕ್ರವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಬೆಳಗ್ಗೆ 7ಕ್ಕೆ ಗಣಹೋಮ, 9ಕ್ಕೆ ಗುರುಪೂಜೆ, 10.30ಕ್ಕೆ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಹಾಗೂ ಮಧ್ಯಾಹ್ನ 12ಕ್ಕೆ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಶ್ರೀ ವರಮಹಾಲಕ್ಷ್ಮಿಯ ಕೃಪಾನುಗ್ರಹಕ್ಕಾಗಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಗಣ್ಯರು, ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ.