ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಕಡಂದಲೆ–ಪಾಲಡ್ಕ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ, 11ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶುಕ್ರವಾರ (ಆ.28) ಸಂಘದ ವತಿಯಿಂದ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.30ಕ್ಕೆ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಬೆಳಿಗ್ಗೆ 9.30ಕ್ಕೆ ಶ್ರೀ ಶಿವಾನಂದ ಶಾಂತಿ, ಮೂಡುಬಿದಿರೆ ಇವರ ಉಪಸ್ಥಿತಿಯಲ್ಲಿ ಮಹಾಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುಪೂಜೆ ಹಾಗೂ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿ, ಪೂಜಾ ಪ್ರಸಾದ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು. ಸಂಘದ ವತಿಯಿಂದ ಆಗಮಿಸಿದ ಎಲ್ಲ ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು, ಸೇವಾದಳ, ಮಹಿಳಾ ಘಟಕ ಮತ್ತು ಭಜನಾ ಮಂಡಳಿಯ ಸದಸ್ಯರು ಸೇರಿದಂತೆ ಊರ ಹಾಗೂ ಪರವೂರಿನ ನೂರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಸನಿಲ್ , ಬಿಲ್ಲವ ಸಂಘದ ಅಧ್ಯಕ್ಷ ಲೀಲಾಧರ ಪೂಜಾರಿ, ಸೇವಾದಳದ ಅಧ್ಯಕ್ಷ ಸೀತಾರಾಮ್ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಗಣೇಶ್ ಕೋಟ್ಯಾನ್ ಸೇರಿದಂತೆ ಹಲವು ಹಿರಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

