ಸೆ.01 : ಜಯರಾಮ ಅಜಿಲರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

0
9

ಮಂಗಳೂರು : ಜಾನಪದ ಕಲಾವಿದ, ದೈವದ ಪಾತ್ರಿ ಮತ್ತು ತುಳು ಯಕ್ಷಗಾನ ಪ್ರಸಂಗ ರ‍್ತೃ ಜಯರಾಮ ಅಜಿಲ ಅವರಿಗೆ ರ‍್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನದ ಗೌರವ ಸರ‍್ಪಣೆಯ ಕರ‍್ಯಕ್ರಮ ಸೆ. 01 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯದ ಕೊಡಿಯಾಲ ಬೈಲ್ ಸರಕಾರಿ ಪ್ರಥಮ ರ‍್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕರ‍್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರ‍್ನಾಟಕ ರ‍್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆಯುವ ಚಾವಡಿ ತಮ್ಮನ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಜಿಲ್ಲಾ ಲಯನ್ಸ್ ಮಾಜಿ ಜಿಲ್ಲಾ ರಾಜ್ಯಪಾಲರಾದ ಎಂ.ಬಿ ಸದಾಶಿವ ಅವರು ಚಾವಡಿ ಸನ್ಮಾನದ ಗೌರವ ಪ್ರಧಾನ ಮಾಡುವರು . ಸುಳ್ಯ ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾದ ಪಿ.ಬಿ.ಸುಧಾಕರ ರೈ ಅಭಿನಂದನಾ ಮಾತುಗಳನ್ನಾಡುವರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೆಳ್ಳೂರು, ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಸರಕಾರಿ ಪ್ರಥಮ ರ‍್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಎನ್ .ಪಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಜಿ., ರ‍್ನಾಟಕ ರ‍್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.