ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಅಧ್ಯಕ್ಷೆಯಾಗಿ ನಿರೀಕ್ಷಾ ಮೆಂಡನ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ಪದಪ್ರದಾನ ಸಮಾರಂಭವು ಆಗಸ್ಟ್ 30ರಂದು ಮಲ್ಪೆಯಲ್ಲಿ ನಡೆಯಲಿದೆ.
ಮಲ್ಪೆಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಬೆಳಗ್ಗೆ 10.30ಕ್ಕೆ ಪದಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಮೀನುಗಾರರ ಘಟಕದ ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಮೀನುಗಾರ ಸಮುದಾಯದ ಮಹಿಳೆಯರನ್ನು ಸಂಘಟಿಸುವುದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಮುದಾಯದ ಅಭಿವೃದ್ಧಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಮಹಿಳಾ ಮೀನುಗಾರ ವಿಭಾಗ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ನಿರೀಕ್ಷಾ ಮೆಂಡನ್ ಅವರ ನೇಮಕಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿಯ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದ್ದಾರೆ..

