ರಾಷ್ಟ್ರೀಯ ಕ್ರೀಡಾ ದಿನಾಚರಣೆ – ಕ್ರೀಡಾ ಬಾಂಧವ್ಯ 2026

0
11

ಕ್ರೀಡಾ ಭಾರತಿ ಉಡುಪಿ ಜಿಲ್ಲೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಲ್ಲಾ ಏಳು ತಾಲೂಕಿನ ಅತ್ಯಂತ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸುವ ವಿಶಿಷ್ಟ ಕಾರ್ಯಕ್ರಮ ನಡೆಯಿತು.

ಹೆಬ್ರಿ ತಾಲೂಕಿನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೆ.ಕೃಷ್ಣಮೂರ್ತಿ ರಾವ್ , ಕಾಪು ತಾಲೂಕಿನ ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸುಧಾಮ ಶೆಟ್ಟಿ, ಕಾರ್ಕಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕೂರಿನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ಶೆಟ್ಟಿ, ಬ್ರಹ್ಮಾವರ ತಾಲೂಕಿನ ಎಸ್ ಎಂ ಎಸ್ ಪದವಿ ಕಾಲೇಜು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ್ ಹೆಗ್ಡೆ , ಉಡುಪಿ ತಾಲೂಕಿನ ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಇಂತ್ರು ಮಸ್ಕರೇನಸ್ , ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರು ಆದ ಕರುಣಾಕರ ಶೆಟ್ಟಿ , ಕುಂದಾಪುರ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಕೊತ್ವಾಲ್ ಅವರಿಗೆ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಭಾರತಿ ಪ್ರಾಂತ ಸಹ ಕಾರ್ಯದರ್ಶಿ ಶ್ರೀ ಪ್ರಸನ್ನ ಶೆಣೈ, ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ , ಮಂಗಳೂರು ವಿಭಾಗ ಸಹ ಸಂಯೋಜಕ ಶ್ರೀ ಲಿಂಗಯ್ಯ ಜಿಲ್ಲಾ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾ ಸನಿಲ್, ಹೆಬ್ರಿ ತಾಲೂಕು ಅಧ್ಯಕ್ಷರಾದ ಸೀತಾನದಿ ವಿಠಲ ಶೆಟ್ಟಿ, ಕಾರ್ಯದರ್ಶಿ ವಿಜಯ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷರಾದ ಶ್ರೀ ಶಿವಾನಂದ ಕಾಮತ್ , ಸದಸ್ಯರಾದ ಪುಷ್ಪರಾಜ್ ಹೆಗ್ಡೆ, ಸನ್ಮಾನಿತರ ಕುಟುಂಬದವರು ಉಪಸ್ಥಿತರಿದ್ದರು.