ಶ್ರೀ ಕೃಷ್ಣ ಮಠದಲ್ಲಿ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ : ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು

0
7

ಉಡುಪಿ : ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಜಗದೊಡೆಯ ಶ್ರೀ ಕೃಷ್ಣನ ಜನ್ಮಾಷ್ಟಮಿ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷಕ್ಕೆ ಅಗತ್ಯವಾಗುವ ನೋಟಿನ ಮಾಲೆಗಳ ತಯಾರಿ ಕಾರ್ಯವನ್ನು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ವೀಕ್ಷಿಸಿದರು. ಈ ಸಂದರ್ಭದಲ್ಲಿ ನೋಟಿನ ಮಾಲೆಗಳ ತಯಾರಿ ಹಾಗೂ ಜನ್ಮಾಷ್ಟಮಿ ಆಚರಣೆಯ ಸಿದ್ಧತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.