ಸೆ.7ರಂದು ಮಂಗಳೂರಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

0
23

ಮಂಗಳೂರು : ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ಮಂಗಳೂರು ಶಾಖೆ ಹಾಗೂ ಅಸೋಸಿಯೇಷನ್ ಆಫ್ ಮೆಡಿಕಲ್ ಕನ್ಸಲ್ಟೆಂಟ್ಸ್ (AMC), ಮಂಗಳೂರು ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಸೆಪ್ಟೆಂಬರ್ 7ರಂದು ಮಂಗಳೂರಿನಲ್ಲಿ ನಡೆಯಲಿದೆ.

ಅಂದು ಸಂಜೆ 7 ಗಂಟೆಗೆ ಅತ್ತಾವರ ರಸ್ತೆಯ ಐಎಂಎ ಹೌಸ್‌ನ ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಬೆಂಗಳೂರು ಪಶ್ಚಿಮ ವಿಭಾಗದ ಕಮಿಷನರ್ ಡಾ. ರಾಜೇಂದ್ರ ಕೆ.ವಿ. ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಶಾಸ್ತ್ರೀಯ ನೃತ್ಯ ಕಲಾವಿದೆ, ನಟಿ ಹಾಗೂ ‘ಕಾಂತಾರ’ ಚಿತ್ರದ ಕಮಲಕ್ಕ ಪಾತ್ರದ ಮೂಲಕ ಗಮನ ಸೆಳೆದಿರುವ ಮಾನಸಿ ಸುಧೀರ್, ನೃತ್ಯನಿಕೇತನ ಕೊಡವೂರು ಇದರ ಸಹ ನಿರ್ದೇಶಕಿ ಭಾಗವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ತೇಜಸ್ವಿನಿ ಆಸ್ಪತ್ರೆ, ಮಂಗಳೂರಿನ ನಿರ್ದೇಶಕ ಡಾ. ಶಾಂತಾರಾಮ ಶೆಟ್ಟಿ ಎಂ., ಇನ್‌ಸ್ಟಿಟ್ಯೂಟ್ ಆಫ್ ನೆಫ್ರೋ ಯುರಾಲಜಿಯ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಎಂ., ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಯುರಾಲಜಿ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ನಾಗರಾಜ್ ರಾವ್ ಎ. ಉಪಸ್ಥಿತರಿರುವರು.

ಮೂವರು ವೈದ್ಯರಿಗೆ ಸನ್ಮಾನ

ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಆನಂದ ಬಂಗೇರ, ಡಾ. ರಂಜಿತ್ ಶೆಟ್ಟಿ ಹಾಗೂ ಡಾ. ಶಾರದಾ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಕಾರ್ಯಕ್ರಮಕ್ಕೂ ಮುನ್ನ ಸಂಜೆ 7.30ರಿಂದ IMA WDW ಹಾಗೂ IMA ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ.

IMA ಅಧ್ಯಕ್ಷ ಡಾ. ಸದಾನಂದ ಪೂಜಾರಿ, ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ, ಖಜಾಂಚಿ ಡಾ. ಜೂಲಿಯನ್ ಸಲ್ದಾನ್ಹಾ, AMC ಅಧ್ಯಕ್ಷ ಡಾ. ಪ್ರಶಾಂತ ಬಿ., ಕಾರ್ಯದರ್ಶಿ ಡಾ. ಸನ್ಮಾನ್ ಕೆ.ಎನ್. ಹಾಗೂ ಖಜಾಂಚಿ ಡಾ. ಅನುರಾಗ್ ಜಿ. ಶೆಟ್ಟಿ ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖವಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಬಳಿಕ ಭೋಜನ ವ್ಯವಸ್ಥೆ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.