ಬೈಲೂರು ಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

0
10

ಬೈಲೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ, ಬೈಲೂರು ಇಲ್ಲಿಯ ಅಂಗನವಾಡಿ ಮಕ್ಕಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಕೊಳಕೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಬಸ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕರಾದ ಆನಂದ ಪೂಜಾರಿ ಅವರು ಉಚಿತವಾಗಿ ಕೊಡ ಮಾಡಿದ ಸಮವಸ್ತ್ರವನ್ನು ಮಕ್ಕಳಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ದಾನಿಗಳಾದ ಆನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯನಿ ವಸಂತಿ ಹೆಚ್ ಜಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಸದಾನಂದ ಸಾಲಿಯಾನ್ , ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ಮಾಜಿ ಕಾರ್ಯದರ್ಶಿ ನಿತಿನ್ ಶೆಟ್ಟಿ, ಎಸ್. ಡಿ. ಎಂ. ಸಿ. ಅಧ್ಯಕ್ಷ ವಸಂತ ಕುಲಾಲ್, ಸದಸ್ಯ ಮಣಿಕಂಠ, ಅಂಗನವಾಡಿ ಶಿಕ್ಷಕಿ ವಾಣಿ ಬಸ್ರಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.