ಮಂಗಳೂರು : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.
ಸಂತೋಷ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪಕ್ಷ ನಿಷ್ಠೆಯಲ್ಲಿ ಕೆಲಸ ಮಾಡಿಕೊಂಡು ಬಂದವರು. ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯ ಸರಕಾರ ಉನ್ನತ ಹುದ್ದೆಯನ್ನು ನೀಡಿದೆ. ಸಂತೋಷ್ ಶೆಟ್ಟಿ ಅವರು ಮೂಡಾ ಅಧ್ಯಕ್ಷರಾಗಿ ಅಭಿವೃದ್ದಿ ಕೆಲಸಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.

