ಯು.ಕೆ.ಎಸ್. ಸೀತಾರಾಮ ಆಚಾರ್ಯ 75ನೇ ವರ್ಷದ ಸವಿ ನೆನಪಿಗಾಗಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

0
9

ಧಾರ್ಮಿಕ ಮುಖಂಡರು, ಉದ್ಯಮಿಗಳು ಹಾಗೂ ಉತ್ತಮ ಕೃಷಿಕರಾದ ಯು.ಕೆ.ಎಸ್. ಸೀತಾರಾಮ ಆಚಾರ್ಯ ಅವರು ತಮ್ಮ 75ನೇ ವರ್ಷದ ಸವಿ ನೆನಪಿಗಾಗಿ ತಾವು ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾದರಿ ಕಾರ್ಯ ಮೆರೆದರು.

ಶಾಲಾ ವೇದಿಕೆಯಲ್ಲಿ ಸೀತಾರಾಮ ಆಚಾರ್ಯ ಅವರ 75ನೇ ವರ್ಷದ ಸುವರ್ಣ ಸಂಭ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಅಭಿನಂದಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ದುರ್ಗಿ ಎಸ್., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮರ ಶೆಟ್ಟಿ, ಉಪಾಧ್ಯಕ್ಷ ಕುಶಲ್ ಶೆಟ್ಟಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಬಾಬು ಆಚಾರ್ಯ ಉಪಸ್ಥಿತರಿದ್ದರು.

ಶಾಲಾ ಅಧ್ಯಾಪಕಿ ಸುಶೀಲಾ ಟೀಚರ್ ಕಾರ್ಯಕ್ರಮ ನಿರ್ವಹಿಸಿದರು. ದಿನೇಶ್ ಆಚಾರ್ಯ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ದುರ್ಗಿ ಎಸ್. ಅಭಿನಂದನಾ ಮಾತುಗಳನ್ನಾಡಿದರು.