ಮಂಗಳೂರು : ಕೂಟ ಮಹಾಜಗತ್ತು ಮಂಗಳೂರು ಅಂಗಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಸಮಾಜದ ಶಿಕ್ಷಕ ರತ್ನರಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ 8ರಂದು ಸಂಜೆ 5.15ಕ್ಕೆ ಪಾಂಡೇಶ್ವರದ ಶ್ರೀ ಗುರು ನರಸಿಂಹ ಸಭಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂಸ್ಕೃತ ವಿದ್ವಾಂಸರಾದ ಡಾ. ವಾಗೀಶ್ವರೀ ಶಿವರಾಮ್, ಮಂಗಳೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕೂಟ ಸಮಾಜದ ವತಿಯಿಂದ ಈ ಸಂದರ್ಭದಲ್ಲಿ ಐವರು ಶಿಕ್ಷಕ ರತ್ನರನ್ನು ಗೌರವಿಸಲಾಗುವುದು. ಶ್ರೀ ಖಂಡಿಗ ಸುಬ್ರಹ್ಮಣ್ಯ ಭಟ್, ಶ್ರೀ ಪಿ. ಶಾಂತರಾಮ ಕಾರಂತ, ಶ್ರೀಮತಿ ವಿಜಯಲಕ್ಷ್ಮಿ ಕಾರಂತ, ಶ್ರೀಮತಿ ಕೆ. ಯಶೋಧ ಹಾಗೂ ಶ್ರೀಮತಿ ಸವಿತಾ ಐತಾಳ್ ಅವರು ಶಿಕ್ಷಕ ರತ್ನ ಗೌರವಕ್ಕೆ ಭಾಜನರಾಗಲಿದ್ದಾರೆ.
ಶಿಕ್ಷಕರು ಸಮಾಜದ ನಿರ್ಮಾಣದಲ್ಲಿ ವಹಿಸುವ ಮಹತ್ವದ ಪಾತ್ರವನ್ನು ಸ್ಮರಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಹಿರಿಯ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತು ಮಂಗಳೂರು ಅಂಗಸಂಸ್ಥೆಯ ಅಧ್ಯಕ್ಷರಾದ ಶ್ರೀಧರ ಹೊಳ್ಳ ಹಾಗೂ ಪದಾಧಿಕಾರಿಗಳು, ಮಹಿಳಾ ವೇದಿಕೆಯ ಸದಸ್ಯರು ಸೇರಿದಂತೆ ಸಮಾಜದ ಬಂಧುಗಳು ಭಾಗವಹಿಸಲಿದ್ದಾರೆ.
ಸಮಾಜದ ಎಲ್ಲಾ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಿಕ್ಷಕ ರತ್ನರನ್ನು ಗೌರವಿಸುವ ಈ ಅರ್ಥಪೂರ್ಣ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
