ಕೊಯಿಲ: ‘ಭಾರತ್ ಜೋಡೋ’ ಕಾರ್ಯಕ್ರಮ – ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

0
6

ಬಂಟ್ವಾಳ : ದೇಶದಲ್ಲಿ ಸಾಮಾನ್ಯ ಜನರ ನೋವು ನಲಿವು ಮತ್ತು ಹಲವು ಸಂಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ವಿವಿಧ ಜನೋಪಯೋಗಿ ಕೊಡುಗೆಗಳನ್ನು ನೀಡಿದ ಹಿನ್ನೆಲೆ ಹೊಂದಿರುವ ಕಾಂಗ್ರೆಸ್ ಸಿದ್ಧಾಂತಕ್ಕೆ ಮತ್ತೆ ಯುವಜನತೆ ಹತ್ತಿರವಾಗುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಇಲ್ಲಿನ ಕೊಯಿಲ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಶನಿವಾರ ನಡೆದ ‘ಭಾರತ್ ಜೋಡೋ’ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರಾದ ಕೆ.ಪರಮೇಶ್ವರ ಪೂಜಾರಿ ರಾಯಿ, ಚಂದಪ್ಪ ಪೂಜಾರಿ ಮಾಬೆಟ್ಟು, ದೇವಕಿ ಕುದ್ಕೋಳಿ, ಪದ್ಮಾವತಿ ಕುದ್ಕೋಳಿ, ಸುನಿಲ್ ಬೈದಗುತ್ತು, ರವಿರಾಜ್ ಹೋರಂಗಳ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಹಿರಿಯ ವಕೀಲ ಅಶ್ವನಿ ಕುಮಾರ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ರಾಮ ಸ್ವರಾಜ್ ಪ್ರತಿಷ್ಠಾನ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಕೃಷಿಕ ಸಮಾಜ ಅಧ್ಯಕ್ಷ ಎಂ.ಪದ್ಮರಾಜ್ ಬಲ್ಲಾಳ್, ವಕೀಲೆ ಶೈಲಜಾ ರಾಜೇಶ್, ರಾಯಿ ವಲಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದಭರ್ೆ, ಸಮಾನ ಮನಸ್ಕರ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ಪಂಜಿಕಲ್ಲು, ಪ್ರಚಾರ ಸಮಿತಿ ಅಧ್ಯಕ್ಷ ಲಾದ್ರು ಮಿನೇಜಸ್, ಗುತ್ತಿಗೆದಾರ ಎಂ.ಬಿ.ಆಶ್ರಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಮೋಹನ ಪೂಜಾರಿ ರಾಯಿ, ಪ್ರಮುಖರಾದ ಕೆ.ಪಿ.ಲೋಬೋ, ಅನಿಲ್ ಕುಮಾರ್ ಪ್ರಭು, ಕೆ.ಎ.ಖಾದರ್, ಸೀತಾರಾಮ ಶಾಂತಿ, ದಿನೇಶ ಶೆಟ್ಟಿಗಾರ್, ನಾರಾಯಣ ಗೌಡ ಮೀಯಾಲು, ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.

ವಲಯ ಸಮಿತಿ ಕಾರ್ಯದಶರ್ಿ ರಾಮಚಂದ್ರ ಶೆಟ್ಟಿಗಾರ್ ಸ್ವಾಗತಿಸಿ, ನಿವೃತ್ತ ಶಿಕ್ಷಕ ಕೆ.ರಮೇಶ್ ನಾಯಕ್ ರಾಯಿ ವಂದಿಸಿದರು. ಸಂಯೋಜಕ ಜಗದೀಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.