9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

0
38

ಮಂಗಳೂರು : 2017ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಮುಕ್ಕಚ್ಚೇರಿಯ ಖಿಲೇರಿಯಾ ನಗರ ನಿವಾಸಿ ಅಶ್ಪಾಕ್ (34) ಬಂಧಿತ ಆರೋಪಿ. ಈತನ ವಿರುದ್ಧದ ಪ್ರಕರಣವು ಮಂಗಳೂರಿನ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಆದರೆ ಆರೋಪಿ ವಿಚಾರಣೆಗೆ ನಿರಂತರವಾಗಿ ಗೈರುಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ಪತ್ತೆಗಾಗಿ ಎಲ್‌ಪಿ (LPC) ವಾರೆಂಟ್ ಹೊರಡಿಸಿತ್ತು.

ನ್ಯಾಯಾಲಯದ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಸೆಪ್ಟೆಂಬರ್ 8ರಂದು ಅಶ್ನಾಕ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಹುಕಾಲದಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಮಂಗಳೂರು ಉತ್ತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.