
ಬ್ರಹ್ಮಾವರ :ಬ್ರಹ್ಮಾವರ ತಾಲ್ಲೂಕು ಐದನೇ ಸಾಹಿತ್ಯ ಸಮ್ಮೇಳನವು ಅಕ್ಟೊಬರ್ 4ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಪೂರ್ವಭಾವಿ ಸಭೆಯು ಭಾನುವಾರ ನಡೆಯಿತು.
ತಾಲ್ಲೂಕು ಸಮಿತಿಯ ಅಧ್ಯಕ್ಷ ರಾಮಚಂದ್ರ ಐತಾಳ್ ಮಾತನಾಡಿ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು.ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ರವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ರವರು ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು
ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು.
ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ ವಂದಿಸಿದರು.
