ಮಾನಸಿಕ ಅಸ್ವಸ್ಥತೆ, ಕುಡಿತದ ಚಟ: ವ್ಯಕ್ತಿ ಆತ್ಮಹತ್ಯೆ

0
68

ಶಿರ್ವ : ಮಾನಸಿಕ ಅಸ್ವಸ್ಥತೆ ಹಾಗೂ ಕುಡಿತದ ಚಟದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕು ಕಳತ್ತೂರು ಗ್ರಾಮದ ಪಾದೂರು ಚಂದ್ರನಗರದಲ್ಲಿ ನಡೆದಿದೆ.

ಮೃತರನ್ನು ಮಟ್ಟಾರು ನಿವಾಸಿ ದೇಶ್ ರಾಜ್ ಬಾಬು (45) ಎಂದು ಗುರುತಿಸಲಾಗಿದೆ.

ದೇಶ್ ರಾಜ್ ಬಾಬು ಅವರು ಕಳತ್ತೂರು ಗ್ರಾಮದ ಪಾದೂರು ಚಂದ್ರನಗರದಲ್ಲಿ ಉಮರಬ್ಬ ಎಂಬುವರ ಮನೆಯಲ್ಲಿ ಮನೆಕೆಲಸ ಮಾಡಿಕೊಂಡಿದ್ದರು. ಅವರು ವಿಪರೀತ ಕುಡಿತದ ಚಟ ಹೊಂದಿದ್ದು, ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕುಡಿತದ ಚಟ, ಮಾನಸಿಕ ಅಸ್ವಸ್ಥತೆ ಅಥವಾ ಇತರ ಯಾವುದೋ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಮಾಹಿತಿ ತಿಳಿದು ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.